ರಾಜ್ಯದಲ್ಲಿ ಯಾವುದೇ ಲಾಕ್ಡೌನ್- ನೈಟ್ ಕರ್ಫ್ಯೂ ಇಲ್ಲ: ಪಿ.ರವಿಕುಮಾರ್ - BC Suddi
ರಾಜ್ಯದಲ್ಲಿ ಯಾವುದೇ ಲಾಕ್ಡೌನ್- ನೈಟ್ ಕರ್ಫ್ಯೂ ಇಲ್ಲ: ಪಿ.ರವಿಕುಮಾರ್

ರಾಜ್ಯದಲ್ಲಿ ಯಾವುದೇ ಲಾಕ್ಡೌನ್- ನೈಟ್ ಕರ್ಫ್ಯೂ ಇಲ್ಲ: ಪಿ.ರವಿಕುಮಾರ್

 

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿರುವಂತೆ ರಾಜ್ಯದಲ್ಲಿ ಲಾಕ್ಡೌನ್ ಅಥವಾ ಸೆಮಿ ಲಾಕ್ಡೌನ್ ಮಾಡುವುದಿಲ್ಲ. ನೈಟ್ ಕರ್ಫ್ಯೂವನ್ನು ಸಹ ಜಾರಿಗೊಳಿಸುವುದಿಲ್ಲ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಶೇ 20ರಷ್ಟು ಹಾಸಿಗೆ ಮೀಸಲು ಇಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಬಹಳ ಹೆಚ್ಚಾಗುತ್ತಿದೆ. ಹೀಗಾಗಿ, ಕಟ್ಟುನಿಟ್ಟಾಗಿ ನಿಯಮಗಳನ್ನು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸೋದು ಬೇಡ ಅಂತಲೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪಕ್ಕದ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ. ಬದಲಾಗಿ ಜನಸಂದಣಿ ಸೇರುವುದನ್ನು ತಡೆಯಬೇಕಾದ ಅಗತ್ಯ ಇದೆ. ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕಷ್ಟೇ ಸೀಮಿತಗೊಳಿಸಿ ಆಚರಿಸಬೇಕಿದೆ ಎಂದರು.

ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ ಕೇಂದ್ರ ಸಂಪುಟ ಕಾರ್ಯದರ್ಶಿ ವಿವಿಧ ರಾಜ್ಯಗಳ ಮುಖ್ಯಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರ ಸಭೆ ನಡೆಸಿದರು. ಈ ಸಭೆಯ ನಂತರ ಕೊರೊನಾ ಸೋಂಕು ತಡೆಯಲು ರೂಪಿಸಿರುವ ನೂತನ ಮಾರ್ಗದರ್ಶಿ ಸೂತ್ರಗಳು ಬಿಡುಗಡೆಯಾಗಿವೆ. ರಾಜ್ಯದ ಪರವಾಗಿ ಮುಖ್ಯಕಾರ್ಯದರ್ಶಿ ರವಿಕುಮಾರ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿ, ಕೊವಿಡ್‌ಗೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿರುವ ಸಭೆಯಲ್ಲಿ ಕೇಂದ್ರ ಸರ್ಕಾರ ನೀಡುವ ಸಲಹೆ ಮೇರೆಗೆ ನೂತನ ಗೈಡ್ಲೈನ್ಸ್ ಬಿಡುಗಡೆ ಮಾಡಲಾಗಿದೆ ಎಂದರು.

 

error: Content is protected !!