ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 23,558 ಮಂದಿಗೆ ಸೋಂಕು ದೃಢ..! - BC Suddi
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ  23,558 ಮಂದಿಗೆ ಸೋಂಕು ದೃಢ..!

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 23,558 ಮಂದಿಗೆ ಸೋಂಕು ದೃಢ..!

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 23,558 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 116 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 12,22,202 ಜನರಿಗೆ ಸೋಂಕು ತಗುಲಿದ್ದು, 13,762 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 6,412 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 10,32,233ಕ್ಕೆ ಏರಿಕೆಯಾಗಿದೆ. ಇನ್ನು 1,76,188 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 13,640 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,83,675ಕ್ಕೆ ಏರಿಕೆಯಾಗಿದೆ. 3,509 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,53,398ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 70 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 5,382 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 1,24,894 ಸಕ್ರಿಯ ಪ್ರಕರಣಗಳಿವೆ.

ಧಾರವಾಡ: ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ದಾಖಲೆಯ 379 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26,035ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 96 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 23,470ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 656 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಮಂಗಳೂರು: ಜಿಲ್ಲೆಯಲ್ಲಿಂದು 401 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,244ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 200 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 36,024ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 743 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಇಂದು 471 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,483ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 128 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 26,204ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 194 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಉಂಟಾಗುತ್ತಿರುವ ಆಕ್ಸಿಜನ್ ಕೊರತೆ ನೀಗಿಸಲು ಮುಂದಾದ ಟಾಟಾ ಕಂಪೆನಿ