ಬೆಂಗಳೂರು ; ಪಿಡಿಒ ಗಳಿಗೆ ಒಂದು ಸಿಹಿ ಸುದ್ದಿ, ಅದೇನು ಗೊತ್ತಾ..?.  ರಾಜ್ಯ ಸರ್ಕಾರವು ಗ್ರಾಮ ಪಂಚಾಯತ್ ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳಿಗೆ ಭರ್ಜರಿ, ಪಿಡಿಒ ಹುದ್ದೆಯನ್ನು ಗ್ರೂಪ್ ಬಿ ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಅದರಂತೆಯೇ ಗ್ರಾಮ ಪಂಚಾಯಿಗಳಿಗೆ 6021ಪಿಡಿಒ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 742 ಹುದ್ದೆಗಳು ಖಾಲಿ ಇವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇಮಕಾತಿ ಪ್ರಾಧಿಕಾರ ಆಗಿದ್ದಾರೆ ಎಂದು ಹೇಳಿದ್ದಾರೆ.