ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು, ಜನರಲ್ಲಿ ಉದಾಸೀನ ಹೆಚ್ಚಾಗಿದೆ : ಸಚಿವ ಸುಧಾಕರ್ - BC Suddi
ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು, ಜನರಲ್ಲಿ ಉದಾಸೀನ ಹೆಚ್ಚಾಗಿದೆ : ಸಚಿವ ಸುಧಾಕರ್

ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು, ಜನರಲ್ಲಿ ಉದಾಸೀನ ಹೆಚ್ಚಾಗಿದೆ : ಸಚಿವ ಸುಧಾಕರ್

ಬೆಂಗಳೂರು: ದೇಶದಲ್ಲಿ ಒಂದು ಲಕ್ಷ ಸೋಂಕಿತರು ಪತ್ತೆಯಾಗಿದೆ. ನಮ್ಮಲ್ಲಿ 32 ಜನರು ಕೂಡ ಸಾವನ್ನಪ್ಪಿದ್ದಾರೆ. ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದೆ. ಸಾವು ಪ್ರಕರಣಗಳ ಅಧ್ಯಯನ ಮಾಡಲು ಸೂಚಿಸಿದ್ದೇನೆ. ನಿಖರ ಕಾರಣ ತಿಳಿಯಲು ಅಧ್ಯಯನ ಮಾಡುತ್ತಿದ್ದೇವೆ.ಜನರು ಅನಗತ್ಯ ಗುಂಪುಗೂಡುವುದನ್ನು ಬಿಡಬೇಕು. ಜನರಲ್ಲಿ ಉದಾಸೀನ ಹೆಚ್ಚಾಗಿದೆ ಎಂದು ಸಚಿವ ಸುಧಾಕರ್ ಹೇಳಿದರು.

ನಾವು ಪದೇ ಪದೆ ಎಚ್ಚರಿಕೆ ಕೊಡುತ್ತಿದ್ದೇವೆ, ಜನರು ನಡವಳಿಕೆ ಸುಧಾರಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನ ಅಪಾಯವಿದೆ. ಲಾಕ್‌ಡೌನ್ ಅಥವಾ ಕರ್ಫ್ಯೂ ಬೇಡ ಎಂದರೆ‌ ಜನರೇ‌ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ 33 ಸಾವಿರ ಹಾಸಿಗೆ ಸಿದ್ಧ ಮಾಡಿದ್ದೇವೆ. ಇದರಲ್ಲಿ 10,083 ಆಕ್ಸಿನೇಟೇಡ್ ಬೆಡ್ ಮಾಡಲಾಗಿದೆ. ಕೋವಿಡ್ ಗಾಗಿ ಹಾಸಿಗೆಗಳನ್ನು ಮೀಸಲಿಡಲಾಗುತ್ತದೆ ಎಂದರು. ನಿನ್ನೆವರೆಗೆ ಒಟ್ಟು 48.5ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆ ನೀಡುವಲ್ಲಿ ರಾಜ್ಯಕ್ಕೆ ಆರನೇ ಸ್ಥಾನವಿದೆ. ಕೇಂದ್ರ ಆರೋಗ್ಯ ಸಚಿವರು 15 ಲಕ್ಷ ಲಸಿಕೆ ಕಳುಹಿಸಿದ್ದಾರೆ ಎಂದರು.

ಬೆಳಗಾವಿ: ಸಾರಿಗೆ ಸೌಲಭ್ಯ ಒದಗಿಸಲು ಮುಂದಾಗುವ ಎಲ್ಲ ಖಾಸಗಿ ಬಸ್ ಪ್ರವರ್ತಕರಿಗೆ ಅಗತ್ಯಬಿದ್ದರೆ ಹೆಚ್ಚಿನ ಪರವಾನಿಗೆ ನೀಡಲಾಗುವುದು : ಜಿಲ್ಲಾಧಿಕಾರಿ ಡಾ.ಕೆ.ಹರೀಶ್

error: Content is protected !!