ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ  ಪೆಟ್ರೋಲ್ ತೆರಿಗೆ ಇಳಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಬಾರಿ ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೆಟ್ರೋಲ್ ತೆರಿಗೆ ಇಳಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಏನೇ ಮಾಡುವುದಿದ್ದರೂ ಕೇಂದ್ರ ಸರ್ಕಾರವೇ ಮಾಡಬೇಕು ಎಂದು ಅವರು ಹೇಳಿದ್ದಾರೆ.