ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ - BC Suddi
ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ದೇವೇಗೌಡ ದಂಪತಿಗಳಿಗೆ ಕರೆ ಮಾಡಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.

ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಕೊರೋನಾ ಸೋಂಕಿತರಾದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ದಂಪತಿಗಳೊಂದಿಗೆ ಮಾತನಾಡಿದೆ. ಅವರ ಆರೋಗ್ಯವನ್ನು ವಿಚಾರಿಸಿದೆ. ಬಹು ಬೇಗ ಗುಣಮುಖರಾಗಲಿ ಎಂಬುದಾಗಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

 

ಇನ್ನೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಕೂಡ, ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ತಮ್ಮ ಹಾಗೂ ಪತ್ನಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ನೀವು ಬಯಸಿದ್ದಲ್ಲಿ ನೀವು ಆಯ್ಕೆ ಮಾಡಿದಂತ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡೋದಕ್ಕೆ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದಾರೆ. ನಾನು ಬೆಂಗಳೂರು ಹೊರತಾಗಿ ಬೇರೆಡೆ ಚಿಕಿತ್ಸೆ ಪಡೆಯೋದಿಲ್ಲ. ಈ ಬಗ್ಗೆ ಅವರಿಗೆ ಮಾಹಿತಿ ನೀಡಿರುವುದಾಗಿ ಟ್ವಿಟ್ ನಲ್ಲಿ ತಿಳಿಸಿದ್ದಾರೆ.

error: Content is protected !!