ಬಾಲ ಕಲಾವಿದನಾಗಿ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾರಂಗದಲ್ಲಿ ಈಗಾಗಲೇ 45 ವರ್ಷಗಳನ್ನು ಪೂರೈಸಿದ್ದಾರೆ. ಇಂದು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರು ತಿಂಗಳ ಮಗುವಿದ್ದಾಗ ಅವರ ತಂದೆ ರಾಜ್ ಕುಮಾರ್ ನಟನೆಯ ‘ಪ್ರೇಮದ ಕಾಣಿಕೆ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. 1976 ರಲ್ಲಿ ಈ ಸಿನಿಮಾ ತೆರೆಕಂಡಿತ್ತು. ಪುನೀತ್ ರಾಜ್ ಕುಮಾರ್ 2002ರಂದು ‘ಅಪ್ಪು’ ಸಿನಿಮಾದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಪುನೀತ್ ರಾಜ್ ಕುಮಾರ್ ಗೆ ಜೋಡಿಯಾಗಿ ರಕ್ಷಿತಾ ಅಭಿನಯಿಸಿದ್ದರು.
ಈ ಚಿತ್ರ ಸೂಪರ್ ಡೂಪರ್ ಹಿಟ್ ಕೂಡ ಆಗಿತ್ತು. ಫ್ಯಾಮಿಲಿ ಸಿನಿಮಾಗಳಲ್ಲೇ ಹೆಚ್ಚಾಗಿ ಅಭಿನಯಿಸಿರುವ ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್ 1975 ಮಾರ್ಚ್ 17ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.