ಕೊರೊನಾ ಎಫೆಕ್ಟ್‌ - 5, 8, 10 ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಪಂಜಾಬ್ ಸರ್ಕಾರ - BC Suddi
ಕೊರೊನಾ ಎಫೆಕ್ಟ್‌ – 5, 8, 10 ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಪಂಜಾಬ್ ಸರ್ಕಾರ

ಕೊರೊನಾ ಎಫೆಕ್ಟ್‌ – 5, 8, 10 ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಪಂಜಾಬ್ ಸರ್ಕಾರ

ಚಂಡೀಗಢ: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆ 5,8 ಹಾಗೂ 10 ನೇ ತರಗತಿಯ ಪರೀಕ್ಷೆಗಳನ್ನು ಪಂಜಾಬ್ ಸರ್ಕಾರ ರದ್ದುಪಡಿಸಿದೆ.

ಕೊರೊನಾ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದಕ್ಕೆ ಹಲವಾರು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪರೀಕ್ಷೆ ರದ್ದು ಮಾಡಬೇಕೆಂದು ಪೋಷಕರು ಸೇರಿದಂತೆ ಅನೇಕ ಮಂದಿ ಆಗ್ರಹಿಸಿದ್ದರು. ಈ ನಿಟ್ಟಿಲ್ಲಿ ಗುರುವಾರ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಶಿಕ್ಷಣ ತಜ್ಞರ ಸಭೆ ಕರೆಯಲಾಗಿದ್ದು ಸಭೆಯಲ್ಲಿ 5,8,10ನೇ ತರಗತಿ ಪರೀಕ್ಷೆ ರದ್ದು ಪಡಿಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮುಖ್ಯಮಂತ್ರಿ ಮಾಹಿತಿ ನೀಡಿದ್ದು, ಕೊರೊನಾ ಕಾರಣದಿಂದಾಗಿ ರಾಜ್ಯದ 5, 8 ಹಾಗೂ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅವರನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ. ಈಗಾಗಲೇ 12 ನೇ ತರಗತಿಯ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ 30ರ ವರೆಗೆ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಮುಂದಿನ ಪರಿಸ್ಥಿತಿ ಅವಲೋಕಿಸಿ ಪರೀಕ್ಷೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್ ಲಸಿಕೆ ಬದಲು ರೇಬೀಸ್ ಲಸಿಕೆಯನ್ನು ನೀಡಿದ್ದ ಸರ್ಕಾರಿ ಆರೋಗ್ಯ ಕೇಂದ್ರದ ನರ್ಸ್