ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೋವಿಡ್‌ಗೆ ಬಲಿ - BC Suddi
ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೋವಿಡ್‌ಗೆ ಬಲಿ

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೋವಿಡ್‌ಗೆ ಬಲಿ

ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೋವಿಡ್‌-೧೯ ಸಾವನ್ನಪ್ಪಿದ್ದಾರೆ.

ರಾಮು ಕಣಗಾಲ್ ಅವರಿಗೆ ಕೆಲ ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಆರೋಗ್ಯ ಕಳೆದ ಐದು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ಸಾವನ್ನಪ್ಪಿದ್ದಾರೆ