ವರುಣ್‌, ಸಂದೀಪ್‌ಗೆ ಕೊರೊನಾ ದೃಢ : ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ - BC Suddi
ವರುಣ್‌, ಸಂದೀಪ್‌ಗೆ ಕೊರೊನಾ ದೃಢ : ಆರ್‌ಸಿಬಿ  ಮತ್ತು ಕೆಕೆಆರ್ ನಡುವಿನ ಪಂದ್ಯ  ಮುಂದೂಡಿಕೆ

ವರುಣ್‌, ಸಂದೀಪ್‌ಗೆ ಕೊರೊನಾ ದೃಢ : ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯ ಮುಂದೂಡಿಕೆ

ಅಹಮದಾಬಾದ್: ಐಪಿಎಲ್‌ ಕ್ರಿಕೆಟ್‌ ಟೂರ್ನಿಯಲ್ಲಿ ಕೋಲ್ಕತ್ತ ನೈಟ್‌ ರೈಡರ್ಸ್ ಪ್ರತಿನಿಧಿಸುತ್ತಿರುವ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್‌ಗೆ ಕೊರೊನಾ ಸೋಂಕು ಪಾಸಿಟಿವ್‌ ಆಗಿದ್ದು ಈ ಹಿನ್ನೆಲೆ ಇಂದು (ಸೋಮವಾರ) ನಡೆಯಲಿದ್ದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತ ನೈಟ್‌ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಸೋಮವಾರ ಸಂಜೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್‌ ನಡುವೆ ಐಪಿಎಲ್‌ ಪಂದ್ಯ ನಿಗದಿಯಾಗಿತ್ತು. ಆದರೆ ಈಗ ”ಆರ್‌ಸಿಬಿ ಮತ್ತು ಕೆಕೆಆರ್‌ ನಡುವಣ ಪಂದ್ಯವನ್ನು ಮರುನಿಗದಿ ಮಾಡಲಾಗಿದೆ” ಎಂದು ಇಎಸ್‌ಪಿಎನ್‌ ಕ್ರಿಕ್ ಇನ್ಫೊ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.

ಹಾಗೆಯೇ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೇಳಿಕೆಯನ್ನು ಉಲ್ಲೇಖ ಮಾಡಿ ಸುದ್ದಿ ಸಂಸ್ಥೆಯೊಂದು ಪಂದ್ಯವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುತ್ತದೆ ಎಂದು ಬಿಸಿಸಿಐ ತಿಳಿಸಿರುವುದಾಗಿ ಟ್ವೀಟ್‌ ಮಾಡಿದೆ.

ಇನ್ನು ಆರ್‌ಸಿಬಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ”ಕೆಕೆಆರ್‌ ಹಾಗೂ ಆರ್‌ಸಿಬಿ ನಡುವಿನ ಇಂದಿನ ಪಂದ್ಯವನ್ನು ಐಪಿಎಲ್ ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ಬಿಸಿಸಿಐ ಮುಂದೂಡಿದೆ. ವರುಣ್ ಮತ್ತು ಸಂದೀಪ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ತಿಳಿಸಿದೆ.

ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳೇ ಹೈಕೋರ್ಟ್‌ಗಳು, ಅವುಗಳ ನೈತಿಕಸ್ಥೈರ್ಯ ಕುಸಿಯಲು ಅವಕಾಶ ನೀಡುವುದಿಲ್ಲ : ಸುಪ್ರೀಂಕೋರ್ಟ್‌