ಮಾರುವೇಷದಲ್ಲಿ ಹೋಗಿ ರಾಬರ್ಟ್ ಸಿನಿಮಾ ನೋಡಿದ ಡಿ. ಬಾಸ್ - BC Suddi
ಮಾರುವೇಷದಲ್ಲಿ ಹೋಗಿ ರಾಬರ್ಟ್ ಸಿನಿಮಾ ನೋಡಿದ ಡಿ. ಬಾಸ್

ಮಾರುವೇಷದಲ್ಲಿ ಹೋಗಿ ರಾಬರ್ಟ್ ಸಿನಿಮಾ ನೋಡಿದ ಡಿ. ಬಾಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುತ್ತಿರುವ ರಾಬರ್ಟ್ 4 ದಿನಗಳಲ್ಲೇ 50 ಕೋಟಿ ಕ್ಲಬ್ ಸೇರುವ ಮೂಲಕ ದಾಖಲೆ ನಿರ್ಮಿಸಿದೆ.

ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾರಿಗೂ ಗೊತ್ತಾಗದ ಹಾಗೆ ಮಾರುವೇಷದಲ್ಲಿ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ನಡುವೆ ಕುಳಿತು ಸಿನಿಮಾ ವೀಕ್ಷಿಸಿದ್ದಾರೆ.

ಅಭಿಮಾನಿಗಳ ಶಿಳ್ಳೆ, ಚಪ್ಪಾಳೆಗಳನ್ನು ಕೇಳಿಕೊಂಡು ಎಂಜಾಯ್ ಮಾಡಿರುವ ದರ್ಶನ್ ಮುಂದಿನ ಸಿನಿಮಾದಲ್ಲಿ ಶಿಳ್ಳೆ, ಚಪ್ಪಾಳೆ ಹೆಚ್ಚಾಗಿ ಬರುವ ದೃಶ್ಯಗಳ ಕಡೆ ಗಮನ ಹರಿಸುವುದಾಗಿ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಿ ಬಾಸ್ ದರ್ಶನ್, ಮಾರುವೇಷದಲ್ಲಿ ಸಿನಿಮಾ ವೀಕ್ಷಿಸಿದ ಬಗ್ಗೆ ವಿವರಿಸಿದ್ದಾರೆ. ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಟನೆ, ತೊದಲು ಮಾತು ಖುಷಿ ಕೊಟ್ಟಿದೆ ಎಂದಿದ್ದಾರೆ.

error: Content is protected !!