ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕನ್ನಡಿಗ ದತ್ತಾತ್ರೇಯ ಹೊಸಬಾಳೆ - BC Suddi
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕನ್ನಡಿಗ ದತ್ತಾತ್ರೇಯ ಹೊಸಬಾಳೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕನ್ನಡಿಗ ದತ್ತಾತ್ರೇಯ ಹೊಸಬಾಳೆ

ಬೆಂಗಳೂರು: ಕರ್ನಾಟಕದ ಶಿವಮೊಗ್ಗದ ದತ್ತಾತ್ರೇಯ ಹೊಸಬಾಳೆಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರೆಸ್ಸೆಸ್) ಪ್ರಧಾನ ಕಾರ್ಯದರ್ಶಿಯಾಗಿ ಕನ್ನಡಿಗ ದತ್ತಾತ್ರೇಯ ಹೊಸಬಾಳೆ  ಆಯ್ಕೆಯಾಗಿದ್ದಾರೆ. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆಯವರಾಗಿದ್ದಾರೆ.

ಕಾಲೇಜು ಶಿಕ್ಷಣದ ನಂತರ ಸಂಘದ ಪೂರ್ಣಾವಧಿ ಕಾರ್ಯಕರ್ತ(ಪ್ರಚಾರಕ) ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಹೊರವಲದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ(ಎಬಿಪಿಎಸ್)ದಲ್ಲಿ ನಡೆದ ಚುನಾವಣೆಯಲ್ಲಿ ಇವರು ಆಯ್ಕೆಯಾಗಿದ್ದಾರೆ ಎಂದು ಆರೆಸ್ಸೆಸ್ ತಿಳಿಸಿದೆ. ಆರೆಸ್ಸೆಸ್ ನಲ್ಲಿ ಸರಸಂಘಚಾಲಕ್ ಮತ್ತು ಸರಕಾರ್ಯವಾಹ ಅತ್ಯುನ್ನತ ಹುದ್ದೆ ಹಾಗೂ ಜವಾಬ್ದಾರಿಯಾಗಿದೆ. ಡಾ. ಮೋಹನ್ ಭಾಗವತ್ ಅವರು ಸರ ಸಂಘ ಚಾಲಕರಾಗಿದ್ದಾರೆ. ಭೈಯಾಜಿ ಜೋಶಿಯವರು 2009ರಿಂದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಾ.20ರಂದು ಎಬಿಪಿಎಸ್ ನಲ್ಲಿ ನಡೆದ ಆರೆಸ್ಸೆಸ್ ನ ಆಂತರಿಕ ಚುನಾವಣೆಯಲ್ಲಿ ಕರ್ನಾಟಕದ ದತ್ತಾತ್ರೇಯ ಹೊಸಬಾಳೆಯವರಿಗೆ ಸರಕಾರ್ಯವಾಹ ಜವಾಬ್ದಾರಿ ಲಭಿಸಿದೆ.ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ. ದತ್ತಾತ್ರೇಯ ಹೊಸಬಾಳೆಯವರು ಸಹ ಸರಕಾರ್ಯವಾಹರಾಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ರಾಷ್ಟ್ರೀಯ ಜವಾಬ್ದಾರಿ ಹೊಂದಿದ್ದರು.

 

 

error: Content is protected !!