ನನ್ನ ವಿರುದ್ಧ ಷಡ್ಯಂತ್ರ ರೂಪಿಸಲು ಯಾರಿಂದಲೂ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ - BC Suddi
ನನ್ನ ವಿರುದ್ಧ ಷಡ್ಯಂತ್ರ ರೂಪಿಸಲು ಯಾರಿಂದಲೂ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

ನನ್ನ ವಿರುದ್ಧ ಷಡ್ಯಂತ್ರ ರೂಪಿಸಲು ಯಾರಿಂದಲೂ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ನನ್ನ ವಿರುದ್ಧ ಷಡ್ಯಂತ್ರ ರೂಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಈ ಬಗ್ಗೆ ಆತಂಕಕ್ಕೆ ಒಳಗಾಗಬಾರದು ಎಂದು ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ, ತಾವು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಜನಾಭಿಪ್ರಾಯ ಆಲಿಸಲು ಮಾ. 26 ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು. ‘ಹಾಗೊಂದು ವೇಳೆ ಯಾರದರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿದರೆ, ನಾನೂ ಎರಡು ಹೆಜ್ಜೆ ಮುಂದಿರುತ್ತೇನೆ. ರಾಜಕಾರಣದಲ್ಲಿ ಅವೆಲ್ಲವೂ ಸ್ವಾಭಾವಿಕ. ಆದರೆ, ನಮ್ಮ ಪಕ್ಷದಲ್ಲಿ ಅಂತಹ ವಾತಾವರಣ ಇಲ್ಲ. ಯಾರ ಮೇಲೂ ಸಂಶಯಪಡುವ ಅಗತ್ಯವಿಲ್ಲ’ ಎಂದು ತಿಳಿಸಿದರು.

ಎಲ್ಲ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ನಡೆಸೋದನ್ನು ನೋಡಿದ್ದೇವೆ. ಆದ್ರೆ ನಮ್ಮ ಪಕ್ಷದಲ್ಲಿ ಎಲ್ಲರೂ ಒಮ್ಮತದ ನಿರ್ಣಯ ತೆಗೆದುಕೊಂಡು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಇಂತಹ ಪ್ರವೃತ್ತಿ ನಮ್ಮ ಪಕ್ಷದಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ಸತೀಶ್ ಜಾರಕೊಹೊಳಿ ಹೇಳಿದ್ದಾರೆ.

error: Content is protected !!