ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ-ಬಹುತೇಕ ಚಟುವಟಿಕೆಗಳು ಸ್ತಬ್ಧ - BC Suddi
ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ-ಬಹುತೇಕ ಚಟುವಟಿಕೆಗಳು ಸ್ತಬ್ಧ

ಮುಂಬೈ: ಇಂದಿನಿಂದ ಮಹಾರಾಷ್ಟ್ರದಲ್ಲಿ ಸೆಕ್ಷನ್ 144 ಜಾರಿ-ಬಹುತೇಕ ಚಟುವಟಿಕೆಗಳು ಸ್ತಬ್ಧ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮುಂದಿನ ಹದಿನೈದು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.

ಇದರಿಂದಾಗಿ ಮುಂದಿನ ಹದಿನೈದು ದಿನಗಳ ಕಾಲ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಭೆ ಸಮಾರಂಭ, ಚಟುವಟಿಕೆಗಳನ್ನು ನಡೆಸುವಂತಿಲ್ಲ. ಅಗತ್ಯ ಸೇವೆ, ಸರಕುಗಳ ರವಾನೆ, ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಈ ನಿರ್ಬಂಧಗಳು ಏಪ್ರಿಲ್ 14ರ ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದ್ದೇವೆ. ನಾಳೆಯಿಂದ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗುತ್ತಿದೆ. ಇದನ್ನು ಲಾಕ್ ಡೌನ್ ಎಂದು ಕರೆಯುವುದಿಲ್ಲ ಎಂದು ಉದ್ದವ್ ಠಾಕ್ರೆ ತಿಳಿಸಿದ್ದಾರೆ.

ಕುಂಭ ಮೇಳ ಮತ್ತು ತಬ್ಲಿಘಿ ನಡುವೆ ಸಾಮ್ಯತೆ ಮಾಡಲು ಸಾಧ್ಯವಿಲ್ಲ: ಸಿಎಂ ತಿರತ್ ಸಿಂಗ್ ರಾವತ್