ರಾಜ್ಯದಲ್ಲಿ ಸರಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ.! - BC Suddi
ರಾಜ್ಯದಲ್ಲಿ ಸರಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ.!

ರಾಜ್ಯದಲ್ಲಿ ಸರಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ.!

 

ದಾವಣಗೆರೆ: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ ರಾಜ್ಯದಲ್ಲಿ‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದಲ್ಲಿರುವರೇ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುವ ಬಗ್ಗೆ ದೂರುತ್ತಿದ್ದಾರೆ. ಅಂದ್ರೆ, ಸರ್ಕಾರದ ವಿರುದ್ಧ ಹೇಳುತ್ತಿರುವರು ಸತ್ಯ ಹೇಳುತ್ತಿದ್ದಾರೆ ಅಂತಾ ಆಯ್ತು. ಕೂಡಲೇ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದರು.

ಯಡಿಯೂರಪ್ಪ ಸರ್ಕಾರದಲ್ಲಿ ವಿದ್ಯಾಸಿರಿ‌ ಯೋಜನೆ ಸ್ಥಗಿತಗೊಂಡಿದೆ. ಅನ್ನಭಾಗ್ಯಕ್ಕೆ ಕತ್ತರಿ ಬಿದ್ದಿದೆ. ಇಂದಿರಾ ಕ್ಯಾಂಟೀನ್ ಬಂದ್ ಮಾಡುವ ಹಂತಕ್ಕೆ ತಂದಿದ್ದಾರೆ. ಬಡವರು, ಎರಡು ಹೊತ್ತು‌ ಊಟ ಮಾಡೋದು ಬಿಜೆಪಿ ಸರ್ಕಾರಕ್ಕೆ ಇಷ್ಟವಿಲ್ಲ ಎಂದರು.

error: Content is protected !!