ಬಿಜೆಪಿಯ 5 ಪ್ರಶ್ನೆಗಳಿಗೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ: ಇದೇ ನನ್ನ ಉತ್ತರ - BC Suddi
ಬಿಜೆಪಿಯ 5 ಪ್ರಶ್ನೆಗಳಿಗೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ: ಇದೇ ನನ್ನ ಉತ್ತರ

ಬಿಜೆಪಿಯ 5 ಪ್ರಶ್ನೆಗಳಿಗೆ 10 ಪ್ರಶ್ನೆ ಕೇಳಿದ ಸಿದ್ದರಾಮಯ್ಯ: ಇದೇ ನನ್ನ ಉತ್ತರ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಕಾಯಿಲೆಗೆ ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದರು. ಪ್ರಧಾನಿಯ ಈ ಭಾಷಣವನ್ನು ಟೀಕಿಸಿದ್ದ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತ. ಹೊರತಾಗಿ ಉಪದೇಶದ ಬುರುಡೆ ಮಾತಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ರಾಜ್ಯ ಬಿಜೆಪಿ ಸಿದ್ದರಾಮಯ್ಯನವರಿಗೆ ಐದು ಪ್ರಶ್ನೆಗಳನ್ನು ಕೇಳಿ ಉತ್ತರಿಸುವಂತೆ ಸವಾಲು ಹಾಕಿತ್ತು.

ಇದೀಗ ಕೌಂಟರ್ ಗೆ ಮರು ಕೌಂಟರ್ ಕೊಟ್ಟಿರುವ ಸಿದ್ದರಾಮಯ್ಯ ನಿಮ್ಮ ಪಂಚ ಪ್ರಶ್ನೆಗಳಿಗೆ ನನ್ನ ದಶ ಪ್ರಶ್ನೆಗಳೇ ಉತ್ತರ ಎಂದು ಬರೆದು 10 ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗಳು ಈ ಕೆಳಗಿನಂತಿವೆ.

ಕರ್ನಾಟಕದಿಂದ #pmcares ನಿಧಿಗೆ ಸಂಗ್ರಹವಾಗಿರುವ ಹಣ ಎಷ್ಟು?

#pmcares ನಿಧಿಯಿಂದ ಇಲ್ಲಿಯ ವರೆಗೆ ಕರ್ನಾಟಕಕ್ಕೆ ಕೊರೊನಾ ನಿರ್ವಹಣೆಗಾಗಿ ನೀಡಿರುವ ದುಡ್ಡು ಎಷ್ಟು?

50,000 ವೆಂಟಿಲೇಟರ್ ತಯಾರಿಕೆಗೆ #pmcares ನಿಧಿಯಿಂದ ರೂ.2000 ಕೋಟಿ ನೀಡಲಾಗಿದೆ. ಅದರಲ್ಲಿ ಕರ್ನಾಟಕಕ್ಕೆ ನೀಡಿದ್ದು ಕೇವಲ 90 ವೆಂಟಿಲೇಟರ್ ಮಾತ್ರ ಎಂದು #PIB ಪ್ರಕಟಣೆ ತಿಳಿಸಿದೆ. ನಮ್ಮ ರಾಜ್ಯಕ್ಕೆ‌ ಮಾತ್ರ ಈ ಅನ್ಯಾಯ ಏಕೆ?

ಬ್ರೇಕಿಂಗ್: ಅಗತ್ಯ ಸೇವೆ ಹೊರತಾಗಿ ಉಳಿದಿದ್ದೆಲ್ಲ ಬಂದ್: ಬಟ್ಟೆ ಅಂಗಡಿ ಮುಚ್ಚಿ ಬಾರ್ ಓಪನ್ ಇಟ್ಟ ಸರ್ಕಾರ

ಕೊರೊನಾ ಸೋಂಕಿನ‌ ಪರಿಣಾಮವಾಗಿ ಲಾಕ್ ಡೌನ್ ಹೇರಿದ ನಂತರ ಬೀದಿಗೆ ಬಿದ್ದ ವಲಸೆ ಕಾರ್ಮಿಕರ ಕಲ್ಯಾಣಕ್ಕಾಗಿ #pmcares ನಿಧಿಯಿಂದ ಬಿಡುಗಡೆಯಾಗಿದ್ದೇ ರೂ.1000 ಕೋಟಿ. ಅದರಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ ರೂ.30 ಕೋಟಿ ಮಾತ್ರ. ಈ ಅನ್ಯಾಯಕ್ಕೆ ಯಾರು ಹೊಣೆ?

ಆಕ್ಸಿಜನ್ ಕೊರತೆಯಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರು ಸಾಯುತ್ತಿರುವುದು ನಿಜವಲ್ಲವೇ? ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೇಡಿಕೆ ಎಷ್ಟು? ಪೂರೈಕೆಯಾಗುತ್ತಿರುವುದು ಎಷ್ಟು? ಕೇಂದ್ರ ಸರ್ಕಾರ ನೀಡಿರುವುದು ಎಷ್ಟು?

ಪ್ರಪಂಚದಲ್ಲಿ ಅತಿಹೆಚ್ಚು ಆಕ್ಸಿಜನ್ ಉತ್ಪಾದಿಸುವ ದೇಶ ಭಾರತವಾಗಿದ್ದರೂ, ದೇಶದಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾಯುತ್ತಿರುವುದು ಯಾಕೆ?

ಭಾರತದಲ್ಲಿ 2019-20ಕ್ಕೆ ಹೋಲಿಸಿದರೆ 2020-21ರಲ್ಲಿ ಆಕ್ಸಿಜನ್ ಉತ್ಪಾದನೆ ದುಪ್ಪಟ್ಟಾಗಿದ್ದರೂ ಈಗಿನ‌ ಆಕ್ಸಿಜನ್ ಕೊರತೆಗೆ ಕಾರಣ ಏನು? ಹೊಣೆ ಯಾರು?

ಒಂದು ವರ್ಷದ ಹಿಂದೆಯೇ ಕೊರೊನಾ ಕಾಣಿಸಿಕೊಂಡಾಗಲೇ ಆಕ್ಸಿಜನ್ ಅವಶ್ಯಕತೆ ಬಗ್ಗೆ ತಜ್ಞರು ಎಚ್ಚರಿಸಿದ್ದರೂ ಹಿಂದಿನ ವರ್ಷಕ್ಕಿಂತ ಆಕ್ಸಿಜನ್ ರಫ್ತಿನ ಪ್ರಮಾಣ ದುಪ್ಪಟ್ಟುಗೊಳಿಸಿದ್ದು ಯಾಕೆ?

ನಮ್ಮ ದೇಶದ ಜನಸಂಖ್ಯಾ ಪ್ರಮಾಣಕ್ಕೆ ಹೋಲಿಸಿದರೆ ಈ ವರೆಗೆ ಕಡಿಮೆ ಪ್ರಮಾಣದಲ್ಲಿ‌‌ ಕೊರೊನಾ ಲಸಿಕೆ ನೀಡಿರುವುದು ಭಾರತದಲ್ಲಿ (10% ಗಿಂತ ಕಡಿಮೆ). ಈ ಹಿಂದುಳಿಯುವಿಕೆಗೆ ಯಾರು ಕಾರಣ?

ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಪ್ರಾಥಮಿಕ ಆರೋಗ್ಯ ಕೇಂದ್ರ ಸುಧಾರಣೆಯಾಗಿದ್ದರೆ ಕೊರೊನಾ ರೋಗಿಗಳು ಚಿಕಿತ್ಸೆ ಇಲ್ಲದೆ ಸಾಯುತ್ತಿರುವುದು ಯಾಕೆ? ಖಾಸಗಿ ಆಸ್ಪತ್ರೆಗಳ ಮುಂದೆ ಕ್ಯೂ ನಿಂತಿರುವುದು ಯಾಕೆ?