ಎಲ್ಲವನ್ನೂ ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ..! - BC Suddi
ಎಲ್ಲವನ್ನೂ ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ..!

ಎಲ್ಲವನ್ನೂ ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ..!

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗಿನ ಭೇಟಿಯನ್ನು ಖಚಿತಪಡಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾ 28 ರಂದು ನಿರಾಕರಿಸಿದ್ದು, “ಎಲ್ಲವನ್ನೂ ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘ಮಹಾ ವಿಕಾಸ್’ ಅಡಿ ಶರದ್ ಪವಾರ್ ಅವರ ಎನ್‌ಸಿಪಿ ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಪ್ರಮುಖ ಪಾಲುದಾರ ಪಕ್ಷವಾಗಿದೆ. ಗೃಹ ಸಚಿವ ಅನಿಲ್ ದೇಶಮುಖ್ ಕೂಡ ಎನ್‌ಪಿಸಿಗೆ ಸೇರಿದವರೇ ಆಗಿದ್ದಾರೆ. ಈ ಇಬ್ಬರು ನಾಯಕರನ್ನು ಅಮಿತ್ ಶಾ ಅಹಮದಾಬಾದ್‌ನಲ್ಲಿ ಭೇಟಿಯಾದರು ಎಂದು ಗುಜರಾತ್ ಮಾಧ್ಯಮಗಳು ವರದಿ ಮಾಡಿದ್ದವು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರು ರಾಜ್ಯ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಹೊಸ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ಈ ವರದಿ ಬಂದಿದೆ.

error: Content is protected !!