ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿದ ರಾಜ್ಯ ಸರ್ಕಾರ ..! - BC Suddi
ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿದ ರಾಜ್ಯ ಸರ್ಕಾರ ..!

ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿದ ರಾಜ್ಯ ಸರ್ಕಾರ ..!

ಬೆಂಗಳೂರು : ಪ್ರವಾಸೋದ್ಯಮ ಇಲಾಖೆಯಿಂದ ಕರಾವಳಿ ಜಾನಪದ ಕ್ರೀಡೆ ಕಂಬಳವನ್ನು ಉತ್ತೇಜಿಸಿ ಪ್ರೋತ್ಸಾಹಿಸಲು ರೂ.1.00 ಕೋಟಿಗಳ ಸಹಾಯಧನ ಬಿಡುಗಡೆ ಮಾಡಿ ಉಡುಗೋರೆ ನೀಡಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಜನರ, ಕರಾವಳಿ ಭಾಗದ ಜನರಿಗೆ ಜನಪ್ರಿಯ ಜಾನಪದ ಕ್ರೀಡೆ ಉತ್ತೇಜಿಸಲು 1 ಕೋಟಿ ಸಹಾಯಧನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಕರಾವಳಿ ಜನರಿಗೆ ಕಂಬಳದ ಸಮಯದಲ್ಲೇ ಭರ್ಜರಿ ನ್ಯೂಸ್ ಸಿಕ್ಕಿದೆ.

ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.50.00 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5.00 ಲಕ್ಷಗಳಂತೆ ರೂ.10.00 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು.

ಈ ಕುರಿತಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ರಾಜಶೇಖರ್ ಆದೇಶ ಹೊರಡಿಸಿದ್ದು, ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

 

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ. ಯೋಗೇಶ್ವರ ರವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5.00ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.

 

 

error: Content is protected !!