ಖಾಸಗಿ ಬಸ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ - BC Suddi
ಖಾಸಗಿ ಬಸ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಖಾಸಗಿ ಬಸ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ನೌಕರರು ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಖಾಸಗಿ ಬಸ್‌ ಮಾಲೀಕರಿಗೆ ಮತ್ತೊಂದು ಮತ್ತೊಂದು ಸಿಹಿ ಸುದ್ದಿ ನೀಡಿದೆ.

ರಾಜ್ಯದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ದಿನನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್‌ಗಳಿಗೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಅಧಿಸೂಚನೆ ಹೊರಡಿಸಿದ್ದಾರೆ.

ಈ ಮೂಲಕ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(3)(ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮುಷ್ಕರದ ಅವಧಿಯಲ್ಲಿ ಪರ್ಯಾಯ ವ್ಯವಸ್ಥೆಯ ಭಾಗವಾಗಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯ್ದೆ 1988 ಸೆಕ್ಷನ್ 66(1)ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

error: Content is protected !!