'ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರೆ ಕಠಿಣ ಕ್ರಮ' - ಸಿಎಂ ಬಿಎಸ್‌ವೈ - BC Suddi
‘ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರೆ ಕಠಿಣ ಕ್ರಮ’ – ಸಿಎಂ ಬಿಎಸ್‌ವೈ

‘ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರೆ ಕಠಿಣ ಕ್ರಮ’ – ಸಿಎಂ ಬಿಎಸ್‌ವೈ

ಬೆಳಗಾವಿ: ಆರನೇ ವೇತನ ಆಯೋಗದ ಶಿಫಾರಸು ಅನ್ವಯಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ನೌಕರರ ಮುಷ್ಕರ ಗುರುವಾರವೂ ಮುಂದುವರೆದಿದ್ದು, ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾರಿಗೆ ನೌಕರರು ಮುಂದಿಟ್ಟ 9 ಬೇಡಿಕೆಗಳ ಪೈಕಿ ಸರ್ಕಾರ ಎಂಟು ಬೇಡಿಕೆಗಳನ್ನು ಈಡೇರಿಸಿದೆ. ಹೀಗಿದ್ದರೂ ಅವರು ನಮ್ಮ ಮನವಿ ಸ್ಪಂದಿಸದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತದೆ. ಇಂದು ಬೆಂಗಳೂರಿಗೆ ಹೋಗುತ್ತಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ. ಬಳಿಕ ನಿರ್ಧಾರ ಕೈಗೊಳ್ಳಿದ್ದೇನೆ” ಎಂದಿದ್ದಾರೆ.

ಕೊವಿಡ್ ಆರ್ಭಟ : 10 ಜಿಲ್ಲೆಗಳಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಮುಷ್ಕರಕ್ಕೆ ಕಾಂಗ್ರೆಸ್‌ ನಾಯಕರು ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈ ವಿಚಾರವನ್ನು ರಾಜಕೀಯಕ್ಕಾಗಿ ಬಳಸಿಕೊಂಡರೆ ನಾನು ಏನು ಹೇಳಲಿ. ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಬಗ್ಗೆ ಇಂದು ಸಂಜೆಯೊಳಗೆ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

error: Content is protected !!