ಯತ್ನಾಳ್ ಬಗ್ಗೆ ಮಾತನಾಡಿದರೆ ಅರೆಹುಚ್ಚನಾಗುತ್ತೇನೆ ಎಂದ ಶಾಸಕ ಎಂ.ಪಿ. ರೇಣುಕಾಚಾರ್ಯ - BC Suddi
ಯತ್ನಾಳ್ ಬಗ್ಗೆ ಮಾತನಾಡಿದರೆ ಅರೆಹುಚ್ಚನಾಗುತ್ತೇನೆ ಎಂದ ಶಾಸಕ ಎಂ.ಪಿ. ರೇಣುಕಾಚಾರ್ಯ

ಯತ್ನಾಳ್ ಬಗ್ಗೆ ಮಾತನಾಡಿದರೆ ಅರೆಹುಚ್ಚನಾಗುತ್ತೇನೆ ಎಂದ ಶಾಸಕ ಎಂ.ಪಿ. ರೇಣುಕಾಚಾರ್ಯ

ರಾಯಚೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಗ್ಗೆ ಮಾತನಾಡಿದರೆ ಅರೆಹುಚ್ಚನಾಗುತ್ತೇನೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಜಿಲ್ಲೆಯ ಮಸ್ಕಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರಿಗೆ ಈಗಾಗಲೇ ಪಕ್ಷದಿಂದ ನೋಟಿಸ್ ಕೊಡಲಾಗಿದೆ. ಈ ಬಗ್ಗೆ ಅವರೇ ಕ್ರಮ ಕೈಗೊಳ್ಳುತ್ತಾರೆ. ಉಪಚುನಾವಣೆ ಪ್ರಚಾರದ ಬಗ್ಗೆ ಮಾತ್ರ ನಾನು ಮಾತನಾಡುತ್ತೇನೆ. ಯತ್ನಾಳ್ ಮತ್ತು ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಬೆಂಬಲ ಇದೆ ಎಂದು ವಿಧಾನಸಭೆ ‍ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಆರ್‌ಎಸ್‌ಎಸ್‌ ಯಾವಾಗಲೂ ಕತ್ತರಿ ಹಾಕುವ ಕೆಲಸ ಮಾಡುವುದಿಲ್ಲ. ಸೂಜಿ, ದಾರದಂತೆ ಜೋಡಿಸುವ ಕೆಲಸ ಮಾಡುತ್ತದೆ ಎಂದರು.

ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಅಮೇರಿಕಾದಲ್ಲಿ ಎಪ್ರಿಲ್‌ 19ರಿಂದ ಯವಕರಿಗೆ ಕೊರೊನಾ ಲಸಿಕೆ : ಜೋ ಬಿಡೆನ್

error: Content is protected !!