ಹೊನ್ನಾಳಿಯ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ರೇಣುಕಾಚಾರ್ಯ - BC Suddi
ಹೊನ್ನಾಳಿಯ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ರೇಣುಕಾಚಾರ್ಯ

ಹೊನ್ನಾಳಿಯ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯ ತಾಲೂಕು ಆಸ್ಪತ್ರೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಯೂ ಆದ ಶಾಸಕ ಎಂ. ಪಿ. ರೇಣುಕಾಚಾರ್ಯ ಕೊರೊನಾ ಲಸಿಕೆ ಪಡೆದರು. ಮಾತ್ರವಲ್ಲ, ಈ ವೇಳೆ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆಯೂ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕೊರೊನಾ ಲಸಿಕೆ ಬಂದ ಬಳಿಕ ಎಷ್ಟೋ ಮಂದಿಗೆ ಒಳ್ಳೆಯದಾಗಿದೆ. ಈಗಾಗಾಲೇ 65 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷದ ಮೇಲ್ಪಟ್ಟವರಿಗೆ ಈಗಾಗಲೇ ಕೋವ್ಯಾಕ್ಸಿನ್ ನೀಡಲಾಗಿದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಅರ್ಹರು ಲಸಿಕೆ ಪಡೆಯಿರಿ. ಯಾವ ಅಡ್ಡ ಪರಿಣಾಮವೂ ಬೀರುವುದಿಲ್ಲ ಎಂದು ಹೇಳಿದರು.

ಕೆಲವರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಕೆಲವರು ವದಂತಿ, ಅಪಪ್ರಚಾರ ನಡೆಸುತ್ತಿದ್ದಾರೆ. ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ನಾನೇ ಲಸಿಕೆ ಪಡೆದಿದ್ದೇನೆ. ಈಗಾಗಲೇ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

error: Content is protected !!