ಪಶ್ಚಿಮಬಂಗಾಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಗುಂಡಿನ ದಾಳಿಗೆ ಮತದಾರ ಬಲಿ - BC Suddi
ಪಶ್ಚಿಮಬಂಗಾಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಗುಂಡಿನ ದಾಳಿಗೆ ಮತದಾರ ಬಲಿ

ಪಶ್ಚಿಮಬಂಗಾಳದಲ್ಲಿ ಉದ್ವಿಗ್ನ ಪರಿಸ್ಥಿತಿ : ಗುಂಡಿನ ದಾಳಿಗೆ ಮತದಾರ ಬಲಿ

ಕೋಲ್ಕತಾ : ಪಂಚರಾಜ್ಯಗಳ ಚುನಾವಣೆಯ ಪೈಕಿ ಇಂದು ಪಶ್ಚಿಮ ಬಂಗಾಳದ 44 ವಿಧಾನಸಭಾ ಕ್ಷೇತ್ರಗಳಿಗೆ ಏ.10 ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮತಗಟ್ಟೆ ಬಳಿ ಮತದಾರರನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೂಚ್ ಬೆಹರ್ ನಲ್ಲಿ ನಡೆದಿದೆ.

ಕೂಚ್ ಬೆಹರ್ ಮತಗಟ್ಟೆ ಹೊರಭಾಗದಲ್ಲಿ ಮೊದಲ ಬಾರಿ ಮತಚಲಾಯಿಸಲು ಆಗಮಿಸಿದ್ದ ಯುವಕನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಚುನಾವಣಾ ಆಯೋಗ ಸೂಚಿಸಿದೆ.

ಮೃತ ಯುವಕನನ್ನು ಆನಂದ್ ಬರ್ಮನ್ (18ವರ್ಷ) ಎಂದು ಗುರುತಿಸಲಾಗಿದೆ. ಈತ ತಮ್ಮ ಪಕ್ಷದ ಬೆಂಬಲಿಗ ಎಂದು ಭಾರತೀಯ ಜನತಾ ಪಕ್ಷ ಹೇಳಿದೆ. ಆದರೆ ಮತದಾರರನ್ನು ಬಿಜೆಪಿ ಕಾರ್ಯಕರ್ತರೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

ಘಟನೆಯ ಬೆನ್ನಲ್ಲೇ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಜಿಲ್ಲೆಯ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಟ ರಕ್ಷಿತ್ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ