ಮುಖ್ಯಮಂತ್ರಿ ಹಡಗೇ ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿವೆ: ಸಿದ್ದರಾಮಯ್ಯ - BC Suddi
ಮುಖ್ಯಮಂತ್ರಿ ಹಡಗೇ ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿವೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಹಡಗೇ ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿವೆ: ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಯಣಿಸುತ್ತಿರುವ ಹಡಗು ಮುಳುಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಬಿಜೆಪಿ ಪಕ್ಷದವರೇ ಆದ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಿತ್ಯವೂ ಏನು ಹೇಳಿಕೆಗಳನ್ನು ಕೊಡುತ್ತಿದ್ದಾರೆ ಗಮನಿಸಿಲ್ಲವೇ? ಮುಖ್ಯಮಂತ್ರಿ ಹಡಗೇ ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿವೆ” ಎಂದರು.

ಇನ್ನು ಅಭ್ಯರ್ಥಿ ಮಾಡುವ ಮೂಲಕ ಸತೀಶ ಜಾರಕಿಹೊಳಿ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಗಲಾ ಅಂಗಡಿ ಅವರಿಗೆ ಏನು ಮಾಡಿದರು?ಮೊದಲು ಯಾರ ಹೆಸರು ಕೇಳಿಬರುತ್ತಿತ್ತು. ನಂತರ ಏನಾಯ್ತು ? ರವಿ ಯಾವಾಗಲೂ ಸುಳ್ಳನ್ನೇ ಹೇಳುತ್ತಾನೆ. ಅವನ ಹೇಳಿಕೆಗೆ ಉತ್ತರ ಕೊಡುವುದಿಲ್ಲ” ಎಂದು ಹೇಳಿದ್ದಾರೆ.