ಕೊರೊನಾ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದು ಭಾರತಕ್ಕೆ ಕರೆ ನೀಡಿದ ಪಾಕ್ ಪ್ರಧಾನಿ - BC Suddi
ಕೊರೊನಾ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದು ಭಾರತಕ್ಕೆ ಕರೆ ನೀಡಿದ ಪಾಕ್ ಪ್ರಧಾನಿ

ಕೊರೊನಾ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ ಎಂದು ಭಾರತಕ್ಕೆ ಕರೆ ನೀಡಿದ ಪಾಕ್ ಪ್ರಧಾನಿ

ಇಸ್ಲಾಮಾಬಾದ್: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಕರೆ ನೀಡಿದ್ದಾರೆ. ಭಾರತದಲ್ಲಿ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಅವರು ಟ್ವೀಟ್ ಮಾಡಿದ್ದಾರೆ.

ಅಪಾಯಕಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ನಾನು ಭಾರತದ ಜೊತೆಗಿರುತ್ತೇನೆ. ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವ ಅವಶ್ಯಕತೆ ಇದೆ. ಕರೊನಾಕ್ಕೆ ತುತ್ತಾಗಿರುವವರು ಬೇಗನೆ ಚೇತರಿಸಿಕೊಳ್ಳಲಿ. ಮಹಾಮಾರಿ ಕೊರೊನಾ ಮಾನವೀಯತೆಗೆ ಸವಾಲೊಡ್ಡಿದೆ. ಇದನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸೋಣ. ನಾವು ಭಾರತದೊಂದಿಗೆ ಜೊತೆಯಾಗಿದ್ದೇವೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಇದಲ್ಲದೇ ಪಾಕಿಸ್ತಾನ್ ವಿದೇಶಾಂಗ ಸಚಿವ ಷಾ ಮಹಮ್ಮದ್ ಖುರೇಶಿ ಕೂಡ ಟ್ವೀಟ್ ಮಾಡಿ ಕೊರೊನಾಕ್ಕೆ ತುತ್ತಾಗಿರುವ ಭಾರತದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಕೊರೊನಾದಿಂದ ಪ್ರಾಣ ಕಳೆದುಕೊಂಡ ಭಾರತೀಯರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕರೊನಾ ವಿರುದ್ಧದ ಹೋರಾಟದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಭಾರತದಲ್ಲಿ ಸತತ ಹತ್ತನೆ ದಿನವೂ ಕೊರೊನಾ ಮೂರು ಲಕ್ಷದ ಗಡಿ ದಾಟಿದೆ. ಶುಕ್ರವಾರ 3,46,786 ಸೋಂಕಿನ ಪ್ರಕರಣಗಳು ಕಂಡು ಬಂದಿವೆ. ಒಟ್ಟು 25 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿವೆ.