ಉತ್ತರ ಪ್ರದೇಶ ಲಾಕ್ : ತಡೆ ನೀಡಿದ ಸುಪ್ರೀಂ - BC Suddi
ಉತ್ತರ ಪ್ರದೇಶ ಲಾಕ್ : ತಡೆ ನೀಡಿದ ಸುಪ್ರೀಂ

ಉತ್ತರ ಪ್ರದೇಶ ಲಾಕ್ : ತಡೆ ನೀಡಿದ ಸುಪ್ರೀಂ

ನವದೆಹಲಿ : ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಐದು ನಗರಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅಧ್ಯಕ್ಷತೆ ವಹಿಸಿದ್ದ ಪೀಠ, ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ಒಡ್ಡಿದೆ.

ಅಲಹಾಬಾದ್ ಹೈಕೋರ್ಟ್ ಸರ್ಕಾರ ಸಂಪೂರ್ಣ ಲಾಕ್ಡೌನ್ ಮಾಡಬೇಕು ಎಂದು ಸೂಚಿಸಿತ್ತು. ಆದರೆ ಉತ್ತರ ಪ್ರದೇಶ ಸರ್ಕಾರ ಅದನ್ನು ನಿರಾಕರಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸಿದ್ದು, ಸಂಪೂರ್ಣ ಲಾಕ್ ಡೌನ್ನಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವುದನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಜತೆಗೆ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.

‘ರಾಜ್ಯಪಾಲರೊಂದಿಗಿನ ಸಭೆ ಬಳಿಕ ಕರ್ನಾಟಕದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ’ – ಆರ್. ಅಶೋಕ್