ಯು.ಪಿ ಸರ್ಕಾರ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ: ಪ್ರಿಯಾಂಕಾ - BC Suddi
ಯು.ಪಿ ಸರ್ಕಾರ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ: ಪ್ರಿಯಾಂಕಾ

ಯು.ಪಿ ಸರ್ಕಾರ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ: ಪ್ರಿಯಾಂಕಾ

ಲಖನೌ: ಉತ್ತರ ಪ್ರದೇಶದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿವೆ. ಆದ್ರೆ ಇದೆಲ್ಲವನ್ನೂ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಸರ್ಕಾರ ಮರೆಮಾಚುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಪಕ್ಷದ ಮುಖಂಡರೊಂದಿಗೆ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ, ಸರ್ಕಾರ ನಿರಂತರವಾಗಿ ಕೋವಿಡ್-19 ಸೋಂಕಿನ ಸಂಖ್ಯೆ ಹಾಗೂ ಸಾವಿನ ಪ್ರಮಾಣವನ್ನು ಮರೆಮಾಚುತ್ತಿದೆ. ಕೊರೋನಾವೈರಸ್ ಪರಿಸ್ಥಿತಿಯನ್ನು ನಿರ್ವಹಿಸುವ ಯಾವುದೇ ವ್ಯವಸ್ಥೆ, ಯೋಜನೆಯನ್ನು ಸರ್ಕಾರ ಹೊಂದಿಲ್ಲ. ಸೋಂಕು ಹರಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಆಸ್ಪತ್ರೆಗಳಲ್ಲಿ ಪರೀಕ್ಷೆ ನಡೆಯುತ್ತಿಲ್ಲ ಎಂಬುದು ರಾಜ್ಯ ಸಚಿವ ಬ್ರಿಜೇಶ್ ಪಾಠಕ್ ಅವರ ಪತ್ರದಿಂದ ಸ್ಪಷ್ಟವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ಕುಂಭ ಮೇಳದಲ್ಲಿಲ್ಲ ಕೊರೊನಾ ಭೀತಿ: ಇದುವರೆಗೆ 10 ಲಕ್ಷ ಜನ ಭಾಗಿ