ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಶಾಸಕ ಅಮೃತ ದೇಸಾಯಿ - BC Suddi
ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಶಾಸಕ ಅಮೃತ ದೇಸಾಯಿ

ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಶಾಸಕ ಅಮೃತ ದೇಸಾಯಿ

ಧಾರವಾಡ: ಧಾರವಾಡ ತಾಲೂಕಿನ ಗರಗ ಗ್ರಾಮದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಮೃತ ದೇಸಾಯಿ ಸ್ಪಷ್ಟನೆ ನೀಡಿದ್ದಾರೆ. ಮಳೆಯಿಂದ ಬಿದ್ದ ಮನೆಗಳಿಗೆ ಪರಿಹಾರ ಕೊಡುವ ಸಂಬಂಧ ಸ್ವತಃ ನಾನು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಹಾರ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ.

ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮನೆ ಎದುರೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವುದು ಸರಿಯಲ್ಲ. ಈಗಾಗಲೇ ಅವರ ಮನೆಯ ಹಾನಿಗೆ 50 ಸಾವಿರ ರೂಪಾಯಿ ಪರಿಹಾರ ಒದಗಿಸಲಾಗಿದೆ. ಜೊತೆಗೆ ಅವರಿಗೆ ಬರುವ ದಿನಗಳಲ್ಲಿ ನಿಯಮಾನುಸಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವುದಾಗಿ ಸಂಸದರ ಮುಖಾಂತರ ಅಭಯ ನೀಡಲಾಗಿತ್ತು.

ಆದರೂ ಈ ರೀತಿ ದುಡುಕಿನ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ. ಏಕಾಏಕಿ ಈ ರೀತಿ ನಿರ್ಧಾರ ಕೈಗೊಂಡಿರುವುದು ನಮಗೂ ಆಘಾತ ಉಂಟು ಮಾಡಿದೆ. ನಮ್ಮ ಮನೆಯಲ್ಲಿ ಒಬ್ಬ ಸದಸ್ಯರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣಕ್ಕೆ ನನಗೆ ತಕ್ಷಣವೇ ಸ್ಥಳಕ್ಕೆ ಹೋಗಲು ಸಾಧ್ಯವಾಗಿಲ್ಲ ಎಂದು ಶಾಸಕರು ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಡಿ ಪ್ರಕರಣ : ಕಮಲ್‌ಪಂತ್ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ದ ಖಾಸಗಿ ಮೊಕದ್ದಮೆ ದಾಖಲು

error: Content is protected !!