ಡಿಕೆಶಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುತ್ತಿಗೆ ಹಾಕಲು ಯತ್ನ - ಬಿಗಿ ಪೊಲೀಸ್ ಭದ್ರತೆ - BC Suddi
ಡಿಕೆಶಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುತ್ತಿಗೆ ಹಾಕಲು ಯತ್ನ – ಬಿಗಿ ಪೊಲೀಸ್ ಭದ್ರತೆ

ಡಿಕೆಶಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುತ್ತಿಗೆ ಹಾಕಲು ಯತ್ನ – ಬಿಗಿ ಪೊಲೀಸ್ ಭದ್ರತೆ

ಬೆಳಗಾವಿ:  ರಮೇಶ ಜಾರಕಿಹೊಳಿ ಅವರ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ತಂಡೋಪ ತಂಡವಾಗಿ ಬರುತ್ತಿರುವುದರಿಂದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಜಾರಕಿಹೊಳಿ ಅಭಿಮಾನಿಗಳು ಗೋಕಾಕದಿಂದ ವಾಹನಗಳಲ್ಲಿ ಬರುತ್ತಿದ್ದು, ಈಗಾಗಲೇ ಒಂದಷ್ಟು ಮಂದಿ ಬಂದು ಸೇರಿದ್ದಾರೆ. ಅವರನ್ನು ಪೊಲೀಸರು ನಿಲ್ದಾಣ ಸಮೀಪದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದಾರೆ. ಅವರು ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಯೋಜಿಸಿದ್ದಾರೆ ಎನ್ನಲಾಗಿದೆ.

ಇನ್ನು ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿರುವ ಡಿಕೆಶಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದು, ರಮೇಶಗೆ ಜೈಕಾರ ಹಾಕುತ್ತಿದ್ದಾರೆ.

ಡಿಕೆಶಿ ಬಂಧಿಸಿದರೆ ಶಾಂತಿ, ಇಲ್ಲವಾದರೆ ಕ್ರಾಂತಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಗೋ ಬ್ಯಾಕ್ ಡಿಕೆಶಿ ಎಂದು ಕೂಗುತ್ತಿದ್ದಾರೆ ಎನ್ನಲಾಗಿದೆ.

ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಡಿ‌.ಕೆ. ಶಿವಕುಮಾರ್ ಸ್ವಾಗತಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದಿದ್ದಾರೆ ಎಂದು ತಿಳಿದು ಬಂದಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್‌ಬಾಸ್‌ ಖ್ಯಾತಿಯ ಚೈತ್ರಾ ಕೊಟ್ಟೂರು

error: Content is protected !!