ಪ್ರಚೋದಾನಕಾರಿ ಹೇಳಿಕೆ ನೀಡದ ಟಿಕಾಯತ್ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು - BC Suddi
ಪ್ರಚೋದಾನಕಾರಿ ಹೇಳಿಕೆ ನೀಡದ ಟಿಕಾಯತ್ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು

ಪ್ರಚೋದಾನಕಾರಿ ಹೇಳಿಕೆ ನೀಡದ ಟಿಕಾಯತ್ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾರ್ಚ್ 20 ರಂದು ನಡೆದ ರೈತರ ಮಹಾಪಂಚಾಯತ್‌ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಅರೋಪದ ಮೇಲೆ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗದ ಬಿ.ಎಚ್. ರಸ್ತೆಯ ಸೈನ್ಸ್ ಮೈದಾನದಲ್ಲಿ ನಡೆ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಕೇಶ್ ಟಿಕಾಯತ್, “ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕರನಾಟಕದ ರೈತರು ಬೆಂಗಳೂರಿಗೆ ದಿಗ್ಭಂಧನ ಹಾಕಿ ಟ್ರ್ಯಾಕ್ಟರ್‌‌ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ಹೇಳಿಕೆ ನೀಡಿದ್ದರು.

ಹಾಗಾಗಿ ಟಿಕಾಯತ್ ವಿರುದ್ಧ ಐಪಿಸಿ ಕಲಂ 153 ರ ಅಡಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬಿಹಾರ ವಿಧಾನಸಭೆಯಲ್ಲಿ ಗಲಾಟೆ – ಶಾಸಕಿಯನ್ನು ಹೊರಹಾಕಿದ ಭದ್ರತಾ ಸಿಬ್ಬಂದಿ

error: Content is protected !!