ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ: ಆಕ್ರೋಶ ಹೊರಹಾಕಿದ ಹೆಚ್.ಡಿ.ಕೆ - BC Suddi
ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ: ಆಕ್ರೋಶ ಹೊರಹಾಕಿದ  ಹೆಚ್.ಡಿ.ಕೆ

ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ: ಆಕ್ರೋಶ ಹೊರಹಾಕಿದ ಹೆಚ್.ಡಿ.ಕೆ

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ವಿಕೃತಿ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ. ಇದನ್ನು ತೀವ್ರವಾಗಿ ಖಂಡಿಸುವೆ ಎಂದಿದ್ದಾರೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಅವರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಗಾರ್ಮೆಂಟ್ಸ್‌ ತೆರೆಯಲು ರಾಜ್ಯ ಸರ್ಕಾರದಿಂದ ಸಮ್ಮತಿ : ಷರತ್ತು ಕಡ್ಡಾಯ