ಮಂಗಳೂರು: ಪೊಲೀಸ್‌ ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಚಾಲನೆ ನೀಡಿದ ಕಮಿಷನರ್‌ - BC Suddi
ಮಂಗಳೂರು: ಪೊಲೀಸ್‌ ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಚಾಲನೆ ನೀಡಿದ ಕಮಿಷನರ್‌

ಮಂಗಳೂರು: ಪೊಲೀಸ್‌ ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಚಾಲನೆ ನೀಡಿದ ಕಮಿಷನರ್‌

ಮಂಗಳೂರು: ಕೋವಿಡ್ ಎರಡನೇ ಅಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗಳಾಗಿ ಮುಂಚೂಣಿಯಲ್ಲಿ ಸೇವೆ ಸಲ್ಲಿಸುವ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಲಾಯಿತು.

ಊಟದ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್, “ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 6ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ. ಅದೇ ರೀತಿ ವೀಕೆಂಡ್‌ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕೂಡಾ ಜಾರಿಯಲ್ಲಿದೆ.

ವೀಕೇಂಡ್‌ ಕರ್ಫ್ಯೂನಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯರೆಗೆ ಸಡಿಲಿಕೆ ನೀಡಲಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಇದು ಅನ್ವಯವಾಗುತ್ತದೆ. ಇದನ್ನು ಹೊರತುಪಡಿಸಿ ಯಾವ ಯಾವ ನಿಯಮಗಳನ್ನು ಪಾಲನೆ ಮಾಡಬೇಕು ಎನ್ನುವುದನ್ನು ಸರ್ಕಾರ ನೀಡಿದೆ” ಎಂದು ಹೇಳಿದ್ದಾರೆ.

‘ಮೂರನೇ ಮಗು ಹೊಂದಿದವರನ್ನು ಜೈಲಿಗೆ ಹಾಕಿ’ : ವಿವಾದಾತ್ಮಕ ಹೇಳಿಕೆ ನೀಡಿದ ಕಂಗನಾ