ರಾಹು‌ಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್‌ನವರು ರಾಜ್ಯದಲ್ಲಿ ಕೇವಲ ಒಂದು ಕ್ಷೇತ್ರವನ್ನು ಗೆದ್ದಿದ್ದಾರೆ: ಸಿ.ಟಿ. ರವಿ - BC Suddi
ರಾಹು‌ಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್‌ನವರು ರಾಜ್ಯದಲ್ಲಿ ಕೇವಲ ಒಂದು ಕ್ಷೇತ್ರವನ್ನು ಗೆದ್ದಿದ್ದಾರೆ: ಸಿ.ಟಿ. ರವಿ

ರಾಹು‌ಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್‌ನವರು ರಾಜ್ಯದಲ್ಲಿ ಕೇವಲ ಒಂದು ಕ್ಷೇತ್ರವನ್ನು ಗೆದ್ದಿದ್ದಾರೆ: ಸಿ.ಟಿ. ರವಿ

ಚಿಕ್ಕಮಗಳೂರು: ಬಿಜೆಪಿಯವರಿಗೆ ರಾಹುಲ್‌ ಗಾಂಧಿ ಅವರನ್ನು ಕಂಡರೆ ಭಯ ಎಂದಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು, “ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಯಾವ ಚುನಾವಣೆಯಲ್ಲಿ ಗೆದ್ದಿದ್ದೀರಿ?” ಎಂದು ಕೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, “ರಾಹು‌ಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್‌ನವರು ರಾಜ್ಯದಲ್ಲಿ ಕೇವಲ ಒಂದು ಕ್ಷೇತ್ರವನ್ನು ಗೆದ್ದಿದ್ದಾರೆ. ಬಿಜೆಪಿ ಬಲಿಷ್ಠ ಅಭ್ಯರ್ಥಿಯನ್ನು ನಿಲ್ಲಿಸಿ ಅಲ್ಲಿ ಪ್ರಚಾರ ಮಾಡಿದ್ದರೆ ಅಲ್ಲಿಯೂ ಕೂಡಾ ನಾವೇ ವಿಜಯಶಾಲಿಯಾಗುತ್ತಿದ್ದೆವು. ಕಾಂಗ್ರೆಸ್‌ ನಿರ್ದಿಷ್ಟತೆ ಇಲ್ಲದ ಎಡಬಿಡಂಗಿತನದ ಪಕ್ಷವಾಗಿದೆ” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಲೀಡರ್‌ಗಳೆಂದು ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಪ್ರಿಯಾಂಕ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಲೀಡರ್‌ಗಳೆಂದು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್‌ಗೆ ನಿರ್ದಿಷ್ಟ ತಾತ್ವಿಕ ತಳಹದಿ ಕೂಡಾ ಇಲ್ಲ. ಅಲ್ಲದೇ, ರಾಷ್ಟ್ರೀಯ ನಾಯಕತ್ವವೂ ಇಲ್ಲ. ಕಾಂಗ್ರೆಸ್‌ ಮುಳುಗುತ್ತಿರುವ ಹಡಗು” ಎಂದು ಲೇವಡಿ ಮಾಡಿದ್ದಾರೆ.

ಭವಿಷ್ಯದ ದೃಷ್ಟಿಯಿಂದ ರೂಪಿಸಿರುವಂತಹ ರಾಷ್ಟ್ರೀಯ ಶಿಕ್ಷಣ ನೀತಿಯು ಜಾಗತಿಕ ಮಟ್ಟದ ಮಾನದಂಡಗಳನ್ನು ಹೊಂದಿದೆ: ಪ್ರಧಾನಿ ಮೋದಿ