ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವ-ಪ್ರಧಾನಿ ನರೇಂದ್ರ ಮೋದಿ - BC Suddi
ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವ-ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ವ್ಯಾಕ್ಸಿನ್ ಉತ್ಸವ-ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ವ್ಯಾಕ್ಸಿನ್ ಉತ್ಸವ ಹಮ್ಮಿಕೊಳ್ಳಲಾಗುವುದೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏಪ್ರಿಲ್ 11ರಿಂದ 14ರವರೆಗೆ ದೇಶಾದ್ಯಂತ ವ್ಯಾಕ್ಸಿನ್ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಧಾನಿಮಂತ್ರಿ ಮನವಿ ಮಾಡಿದ್ದಾರೆ.

ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಬೇಕಾಗಿದೆ ಎಂದಿದ್ದಾರೆ. ಹೆಚ್ಚು ಹೆಚ್ಚು ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸಬೇಕು. ಸೂಕ್ತ ವ್ಯವಸ್ಥೆಯ ಮೂಲಕ ಸೋಂಕಿತರನ್ನು ಪತ್ತೆ ಹಚ್ಚಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊರೋನಾ ತಡೆಗೆ ಎಲ್ಲರೂ ಸರಕಾರಗಳಾ ಜೊತೆ ಕೈಜೋಡಿಸುವ ಅಗತ್ಯವಿದೆ. ಸೋಂಕು ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ ಎಂದರು. ಸೋಂಕು ಪತ್ತೆ, ಪರೀಕ್ಷೆ ಹಾಗೂ ಉಪಚಾರ ಅನೀವಾರ್ಯವಾಗಿದೆ. ದೇಶದಲ್ಲಿ ಮೊದಲನೇ ಅಲೆ ಮುಗಿದಿದ್ದು, ಪಾಸಿಟಿವ್ ದರ ಹೆಚ್ಚಳವಾಗುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕಾಗಿದೆ ಎಂದರು.

error: Content is protected !!