ಬೆಂಗಳೂರು : ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಮಲಿಂಗ ರೆಡ್ಡಿ, ಪ್ರಿಯಾಂಕ ಖರ್ಗೆ, ಯು.ಟಿ. ಖಾದರ್, ಜಮೀರ್ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಇದ್ದಾರೆ. ಇವರ ಜೊತೆಗೆ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸಹ ಸಭೆಗೆ ಹಾಜರಾಗಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ, ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಸೇರಿದಂತೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಕೆಲ ನೀತಿ ನಿಲುವುಗಳನ್ನು ಖಂಡಿಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದ್ದು, ಇನ್ನು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.