ಕೋವಿಡ್ ನಿಯಮ ಉಲ್ಲಂಘನೆ ಆರೋಪ : 35 ರೈತರ ಮೇಲೆ ಕೇಸ್ - BC Suddi
ಕೋವಿಡ್ ನಿಯಮ ಉಲ್ಲಂಘನೆ ಆರೋಪ : 35 ರೈತರ ಮೇಲೆ ಕೇಸ್

ಕೋವಿಡ್ ನಿಯಮ ಉಲ್ಲಂಘನೆ ಆರೋಪ : 35 ರೈತರ ಮೇಲೆ ಕೇಸ್

ಹಾವೇರಿ: ಸಾಲ ಮನ್ನಾ ಮಾಡಿದ ಹಣ ಬಿಡುಗಡೆ ಮಾಡುವಂತೆ ಜಿಲ್ಲೆಯ ರಾಣೆಬೆನ್ನೂರು ನಗರದ ಇಂಡಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದ 30 ರಿಂದ 35 ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಈ ಕೇಸ್ ದಾಖಲಾಗಿದೆ.

2019ರಲ್ಲಿ ಸಾಲಮನ್ನಾ ಯೋಜನೆಯಡಿ ಹಣ ಬಿಡುಗಡೆಯಾದ್ರೂ ರೈತರ ಖಾತೆಗೆ ಹಣ ಜಮಾ ಆಗಿಲ್ಲವೆಂದು ರೈತರು ಪ್ರತಿಭಟನೆ ಬ್ಯಾಂಕ್ ಮುಂದೆ ಪ್ರತಿಭಟನೆ ಮಾಡಿದ್ದರು. ಕೊರೊನಾ ಎರಡನೇ ಅಲೆಯ ಅಬ್ಬರವಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ್ದಕ್ಕೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಣೆಬೆನ್ನೂರು ನಗರ ಠಾಣೆ ಪಿಎಸ್‍ಐ ಪ್ರಭು ಕೆಳಗಿನಮನಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಸಂಜನಾ ಗಲ್ರಾನಿಗೆ ಕೊರೊನಾ ಪಾಸಿಟಿವ್