ಪಶ್ಚಿಮ ಬಂಗಾಳದ ಅಭಿವೃದ್ಧಿ ಬಗ್ಗೆ ಮಮತಾ ಬ್ಯಾನರ್ಜಿಗೆ ಆಸಕ್ತಿ ಇಲ್ಲ : ಯೋಗಿ ಆದಿತ್ಯ ನಾಥ್ - BC Suddi
ಪಶ್ಚಿಮ ಬಂಗಾಳದ ಅಭಿವೃದ್ಧಿ ಬಗ್ಗೆ ಮಮತಾ ಬ್ಯಾನರ್ಜಿಗೆ ಆಸಕ್ತಿ ಇಲ್ಲ : ಯೋಗಿ ಆದಿತ್ಯ ನಾಥ್

ಪಶ್ಚಿಮ ಬಂಗಾಳದ ಅಭಿವೃದ್ಧಿ ಬಗ್ಗೆ ಮಮತಾ ಬ್ಯಾನರ್ಜಿಗೆ ಆಸಕ್ತಿ ಇಲ್ಲ : ಯೋಗಿ ಆದಿತ್ಯ ನಾಥ್

ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಗೂಂಡಾ ಕೃತ್ಯಗಳಿಗೆ ಹೆಚ್ಚು ಉತ್ತೇಜನ ನೀಡಿದ್ದಾರೆ. ಆದ್ರೆ ಅವರಿಗೆ ಪಶ್ಚಿಮ ಬಂಗಾಳ ಅಭಿವೃದ್ಧಿ ಬಗ್ಗೆ ಆಸಕ್ತಿ ಇಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಅಂಫಾನ್ ಚಂಡಮಾರುತದ ಬಳಿಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಟಿಎಂಸಿ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ಅಂತ್ಯದ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರು: ಯುಗಾದಿ, ಹೋಳಿ, ಶಬ್ ಎ ಬರಾತ್, ಈಸ್ಟರ್ ಹಬ್ಬಗಳ ಸಾರ್ವಜನಿಕ ಆಚರಣೆಗೆ ನಿಷೇಧ

ಅಭಿವೃದ್ಧಿ ಮತ್ತು ಪ್ರಗತಿಯ ಹೊಸ ಯುಗಕ್ಕೆ ನಾಂದಿ ಹಾಡಲು ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ. ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಂದುವರಿದ ಮತ್ತು ಪ್ರಗತಿಪರ ರಾಜ್ಯವಾಗಿತ್ತು. ಆದರೆ ಕಾಂಗ್ರೆಸ್, ಎಡರಂಗ ಮತ್ತು ಟಿಎಂಸಿ ರಾಜ್ಯದ ಕೈಗಾರಿಕಾ ಬೆಳವಣಿಗೆಯನ್ನು ಕಂಠಿತಗೊಳಿಸಿತ್ತು. ಬಳಿಕ ಭ್ರಷ್ಟಾಚಾರ ಮನೆ ಮಾಡಿತು ಎಂದು ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

error: Content is protected !!