ಪಶ್ಚಿಮ ಬಂಗಾಳ ಹಿಂಸಾಚಾರದಲ್ಲಿ 6 ಮಂದಿ ಬಿಜೆಪಿ ಕಾರ್ಯಕರ್ತರ ಸಾವು : ವರದಿ ಕೇಳಿದ ಕೇಂದ್ರ ಸರ್ಕಾರ - BC Suddi
 ಪಶ್ಚಿಮ ಬಂಗಾಳ ಹಿಂಸಾಚಾರದಲ್ಲಿ 6 ಮಂದಿ ಬಿಜೆಪಿ ಕಾರ್ಯಕರ್ತರ ಸಾವು : ವರದಿ ಕೇಳಿದ ಕೇಂದ್ರ ಸರ್ಕಾರ

 ಪಶ್ಚಿಮ ಬಂಗಾಳ ಹಿಂಸಾಚಾರದಲ್ಲಿ 6 ಮಂದಿ ಬಿಜೆಪಿ ಕಾರ್ಯಕರ್ತರ ಸಾವು : ವರದಿ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಫಲಿತಾಂಶದ ದಿನದಂದು ಭಾರೀ ಹಿಂಸಾಚಾರ ನಡೆದಿದ್ದು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ಹಿಂಸಾಚಾರ ನಡೆದು 6 ಮಂದಿ ಸಾವನ್ನಪ್ಪಿದ್ದು, ಹಲವರು ಕಾರ್ಯಕರ್ತರು ಗಾಯಗೊಂಡಿದ್ದು, ಈ ಕುರಿತು ಕೇಂದ್ರ ಗೃಹ ಸಚಿವಾಲಯ ವರದಿ ನೀಡುವಂತೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ” ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಅನೇಕ ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಅನೇಕ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಕ್ಷದ ಅನೇಕ ಕಾರ್ಯಕರ್ತರ ಮನೆ ಮತ್ತು ಅಂಗಡಿಗಳು ಧ್ವಂಸವಾಗಿವೆ. ಮಮತಾ ಬ್ಯಾನರ್ಜಿ ಸೋಲು ಮತ್ತು ತೃಣಮೂಲ ಕಾಂಗ್ರೆಸ್​ ಗೆಲುವನ್ನು ಹಿಂಸೆ ಮತ್ತು ರಕ್ತದಿಂದ ಆಚರಿಸಲು ಟಿಎಂಸಿ ಪ್ರಾರಂಭಿಸಿದೆ. ಇದನ್ನು ಖಂಡಿಸುತ್ತೇವೆ ಎಂದು ಹೇಳಿದೆ.

ಇನ್ನೊಂದೆಡೆ ಆಡಳಿತಾರೂಢ ಟಿಎಂಸಿ ಪಕ್ಷದ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳ ವಿರುದ್ಧ ಪ್ರಜಾಸತಾತ್ಮಕ ಮಾರ್ಗದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದಿನಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ,

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ನಂತರ ಟಿಎಂಸಿ ಕಾರ್ಯಕರ್ತರು ನಡೆಸಿದ ವ್ಯಾಪಕ ಹಿಂಸಾಚಾರದ ವಿರುದ್ಧ ಮೇ 5 ರಂದು ರಾಷ್ಟ್ರವ್ಯಾಪಿ ಧರಣಿ ನಡೆಸಲಾಗುವುದು, ಕೋವಿಡ್-19 ಮಾರ್ಗಸೂಚಿ ಅನ್ವಯ ಈ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಸಿರಮ್ ಸಂಸ್ಥೆ, ತಿಂಗಳಿಗೆ ಸುಮಾರು 6 -7 ಕೋಟಿ ಡೋಸ್ ಕೊವೀಡ್ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದ್ದು: ಜುಲೈ ವೇಳೆಗೆ 10 ಕೋಟಿ ಡೋಸ್ ಉತ್ಪಾದನೆ: ಸೀರಮ್ ಮುಖ್ಯಸ್ಥ