ಸೆಕ್ಸ್ ಸಿಡಿ ಬಗ್ಗೆ  ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.? - BC Suddi
ಸೆಕ್ಸ್ ಸಿಡಿ ಬಗ್ಗೆ  ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?

ಸೆಕ್ಸ್ ಸಿಡಿ ಬಗ್ಗೆ  ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?

 

ಹಾವೇರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಷಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿ ಯುವರಾಜನ ಬಳಿ ಸಿಡಿ ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿಡಿಗಳನ್ನು ಖರೀದಿ ಮಾಡುತ್ತಾರೆ. ಈಗಾಗಲೇ ಕಾಂಗ್ರೆಸ್ ಮಹಾನಾಯಕನ ಹೆಸರು ಹೊರಬಿದ್ದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜನ ಹೆಸರು ಹೊರಬರಲಿದೆ ಎಂದು ಹೇಳಿದ್ದಾರೆ.

ಮಹಾನಾಯಕ ಮತ್ತು ಯುವರಾಜರು ಹೆಣ್ಣುಮಕ್ಕಳನ್ನು ಬಿಟ್ಟು ಕೆಲವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಾರೆ. ನನಗೆ ಬೆಂಬಲ ನೀಡದಿದ್ದರೆ ತೊಂದರ ಕೊಟ್ಟರೆ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೆದರಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

error: Content is protected !!