ಸಿಎಂ ಬಿಎಸ್‌ವೈ ಉತ್ತರಾಧಿಕಾರಿ ಯಾರು ಎನ್ನುವುದನ್ನು ಪಕ್ಷದ ವರಿಷ್ಠರೇ ತಿಳಿಸಬೇಕು : ಆರ್‌.ಅಶೋಕ್‌‌ - BC Suddi
ಸಿಎಂ ಬಿಎಸ್‌ವೈ ಉತ್ತರಾಧಿಕಾರಿ ಯಾರು ಎನ್ನುವುದನ್ನು ಪಕ್ಷದ ವರಿಷ್ಠರೇ ತಿಳಿಸಬೇಕು : ಆರ್‌.ಅಶೋಕ್‌‌

ಸಿಎಂ ಬಿಎಸ್‌ವೈ ಉತ್ತರಾಧಿಕಾರಿ ಯಾರು ಎನ್ನುವುದನ್ನು ಪಕ್ಷದ ವರಿಷ್ಠರೇ ತಿಳಿಸಬೇಕು : ಆರ್‌.ಅಶೋಕ್‌‌

ಸಿಂಧನೂರು: “ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸಿಎಂ ಬಿ.ಎಸ್‌‌.ಯಡಿಯೂರಪ್ಪ ಅವರ ಉತ್ತರಾಧಿಕಾರಿಯೋ ಅಥವಾ ಅಲ್ಲವೋ ಎನ್ನುವುದನ್ನು ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರೇ ತಿಳಿಸಬೇಕಾಗಿದ್ದು, ಈ ಬಗ್ಗೆ ನಾನು ಏನೂ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಕಂದಾಯ ಇಲಾಖೆ ಸಚಿವ ಆರ್‌.ಅಶೋಕ್‌‌ ಹೇಳಿದ್ದಾರೆ.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಅವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಕ್ಷದ ವರಿಷ್ಠರು ಬಸನಗೌಡ ಪಾಟೀಲ ಯತ್ನಾಳ್‌ ಅವರ ವಿರುದ್ದ ಕ್ರಮ ತೆಗೆದುಕೊಳ್ಳಲಿದ್ದಾರೆ. ಸಿಎಂ ಬಿಎಸ್‌ವೈ ಅವರ ವಿರುದ್ದ ಪತ್ರ ಬರೆದಿದ್ದ ಸಚಿವ ಈಶ್ವರಪ್ಪ ಅವರು ಈಗಾಗಲೇ ಸರಿಯಾಗಿದ್ದಾರೆ” ಎಂದಿದ್ದಾರೆ.

“ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಿಎಸ್‌ವೈ ಅವರ ನಾಯಕತ್ವದಿಂದ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಇನ್ನು ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ” ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಕೊರೊನಾದ ಸಂಕಷ್ಟದ ಸಂದರ್ಭದಲ್ಲೂ ಕೂಡಾ ಸಾರಿಗೆ ನೌಕರರಿಗೆ ಸಂಬಳ ನೀಡಲಾಗಿತ್ತು. ಆದರೂ ಕೂಡಾ ಸಾರಿಗೆ ನೌಕರರು ಸರ್ಕಾರದ ವಿರುದ್ದ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದಿಂದ ಸಾರ್ವಜನಿಕರಿಗೆ ತುಂಬಾ ಕಷ್ಟವಾಗುತ್ತಿದೆ. ಈ ಸಮಸ್ಯೆಯನ್ನು ನೌಕರರು ಮಾತುಕತೆಯ ಮೂಲಕ ಸರಿಪಡಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

“ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಸಿದ್ದವಿದೆ. ಸಾರ್ವಜನಿಕರಿಗೆ ತೊಂದರೆ ಆಗುಂತಹ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ ನೀಡಿದರೆ ಹೇಗೆ?. ರಾಜ್ಯದಲ್ಲಿ ನೂತನವಾಗಿ 2025 ಹೊಸ ಸರ್ವೇಯರ್‌ಗಳನ್ನು ನೇಮಿಸಿದ್ದು, ಅವರು ವಾರದೊಳಗೆ ಕೆಲಸಕ್ಕೆ ಹಾಜರಾಗಲಿದ್ದಾರೆ” ಎಂದಿದ್ದಾರೆ.

ಭಯೋತ್ಪಾದನೆಯನ್ನು ಎದುರಿಸಲು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು : ಕೇರಳ ಶಾಸಕ ಪಿ ಸಿ ಜಾರ್ಜ್