ಮಂಗಳೂರು: ಪೊಲೀಸ್ ಕಮಿಷನರೇಟ್ 35 ಮಹಿಳಾ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ - BC Suddi
ಮಂಗಳೂರು: ಪೊಲೀಸ್ ಕಮಿಷನರೇಟ್ 35 ಮಹಿಳಾ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

ಮಂಗಳೂರು: ಪೊಲೀಸ್ ಕಮಿಷನರೇಟ್ 35 ಮಹಿಳಾ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಈ ಮೂಲಕ ಪೊಲೀಸ್ ಇಲಾಖೆಯು ಗರ್ಭಿಣಿ ಪೊಲೀಸ್ ಸಿಬ್ಬಂದಿ ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ನೀಡಲಾಗಿದೆ.

ಒಂದನೇ ಕೋವಿಡ್ ಅಲೆಯ ಸಂದರ್ಭದಲ್ಲಿ 300ಕ್ಕೂ ಅಧಿಕ ‌ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.

‘ಪ್ರಧಾನಿ ಮೋದಿಗೆ ಜನರ ಆರೋಗ್ಯಕ್ಕಿಂತ ಚುನಾವಣೆಯೇ ಮುಖ್ಯ’ – ಡಿಕೆಶಿ