ಬೆಂಗಳೂರು : ಇಂದು ಬೆಂಗಳೂರಿನಲ್ಲಿ ಸಿಐಟಿಯು ಸಂಘಟನೆಯ 131 ಇಲಾಖೆಯಲ್ಲಿ ಕೆಲಸ ಮಾಡುವ ಕೆಲಸಗಾರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರ ಜೊತೆಗೆ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಹಾಗೂ ಸಾರಿಗೆ ನೌಕರರು ಇಂದು ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಗೆ ಟ್ರಾಫಿಕ್ ಬಿಸಿ ಕೂಡ ತಟ್ಟಲಿದೆ.

ಇಂದು ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು ಇಂದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ .ಇಂದು ಸಾವಿರಾರು ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿರುವುದರಿಂದ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರಿಗೆ ಟ್ರಾಫಿಕ್ ಜಾಮ್ ಆಗುವ ಎಲ್ಲಾ ಸಾಧ್ಯತೆಗಳಿವೆ.