ವಾಶಿಂಗ್ಟನ್: ಕೊವಿಡ್-19ಲಸಿಕೆ ವಿತರಣೆ ನಡುವೆಯೂ ಒಂದೇ ದಿನ 64267 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಅಮೆರಿಕಾದಲ್ಲಿ ಈಗಾಗಲೇ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5.35 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 1656 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,35,429 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು2,95,90,690 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 2,01,81,244 ಸೋಂಕಿತರು ಗುಣಮುಖರಾಗಿದ್ದು, 88,74,017 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಆದರು ಇಲ್ಲಿ ಮಾತ್ರ ಕೊರೊನಾ ವೈರಸ್ ಕಡಿಮೆಯಾಗುತ್ತಿಲ್ಲ.

ಹಾಗೂ ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,607 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,66,47,742ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9,317 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,90,968ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,22,57,239 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,17,99,535 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.