ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ- 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - BC Suddi
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ- 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ- 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಕಳೆದ ಮೂರು ದಿನಗಳಿಂದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಏಪ್ರಿಲ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರೈಲು ಪ್ರಯಾಣಿಕರ ಗಮನಕ್ಕೆ: ಈ ಮಾರ್ಗಸೂಚಿ ಪಾಲನೆ ಕಡ್ಡಾಯ